ಏಷ್ಯಾ ಕಪ್ ಸೆಪ್ಟೆಂಬರ್‌ನಲ್ಲಿ

ಈ ಬಾರಿಯ ಏಷ್ಯಾ ಕಪ್ ಸೆಪ್ಟೆಂಬರ್‌ನ ಆರಂಭಿಕ ವಾರದಲ್ಲಿ ನಡೆಯಲಿದೆ. 13 ದಿನಗಳ ಕಾಲ ನಡೆಯುವ ಈ ಟೂರ್ನಮೆಂಟ್‌ನಲ್ಲಿ ಒಟ್ಟು 6 ತಂಡಗಳು ಪಾಲ್ಗೊಳ್ಳಲಿದ್ದು, ಫೈನಲ್ ಸೇರಿದಂತೆ 13 ಪಂದ್ಯಗಳು ನಡೆಯಲಿವೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿವೆ. ಅವರ ಜೊತೆಗೆ ಒಂದು ತಂಡ ಅರ್ಹತೆ ಪಡೆದು ಪ್ರವೇಶಿಸಲಿದೆ.

ಏಕದಿನ ವಿಶ್ವಕಪ್ ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿದೆ

ಈ ವರ್ಷದ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ ಎಂದು ತಿಳಿದುಬಂದಿದೆ. ಐಸಿಸಿ ಇನ್ನೂ ಅದರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಕಳೆದ ವಾರ ಇಎಸ್‌ಪಿಎನ್ ಕ್ರಿಕಿನ್ಫೋ ನೀಡಿದ ವರದಿಯ ಪ್ರಕಾರ, ಏಷ್ಯಾಕಪ್ ಟೂರ್ನಮೆಂಟ್‌ನ ಹೆಚ್ಚಿನ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿವೆ. ಆದರೆ ಭಾರತ

ಭಾರತದಲ್ಲಿ ನಡೆಯುವ ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಪಾಕಿಸ್ತಾನ ಭಾಗವಹಿಸದಿರಲು ಬೆದರಿಕೆ

ಏಷ್ಯಾ ಕಪ್ ಪಂದ್ಯಾವಳಿಗೆ ಭಾರತ ಪಾಕಿಸ್ತಾನಕ್ಕೆ ಬರದಿದ್ದರೆ, ಪಾಕಿಸ್ತಾನ ಕ್ರಿಕೆಟ್ ತಂಡ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಭಾರತದಲ್ಲಿ ವಿಶ್ವಕಪ್ ಪಂದ್ಯ ಆಡುವುದರ ಬಗ್ಗೆ ಪಾಕಿಸ್ತಾನದಲ್ಲಿ ಅನುಮಾನ

ಪಿಸಿಬಿ ಅಧಿಕಾರಿಯೊಬ್ಬರು ಹೇಳಿದಂತೆ, ಪಾಕಿಸ್ತಾನದ ಪಂದ್ಯಗಳನ್ನು ಶ್ರೀಲಂಕಾ ಅಥವಾ ಬಾಂಗ್ಲಾದೇಶದಲ್ಲಿ ನಡೆಸಲಾಗುವುದು.

Next Story