2024ನ್ನು ಈವರೆಗೆ ದಾಖಲಾದ ಅತ್ಯಂತ ಉಷ್ಣ ವರ್ಷವೆಂದು ಘೋಷಿಸಲಾಗಿದೆ. ಹವಾಮಾನ ಬದಲಾವಣೆಯಿಂದಾಗಿ ಪ್ರಪಂಚದಾದ್ಯಂತ ತಾಪಮಾನದಲ್ಲಿ ದಾಖಲೆಯ ಏರಿಕೆ ಕಂಡುಬಂದಿದೆ.
ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಜುಲೈ 2 ರಂದು ಸತ್ಸಂಗದ ನಂತರ ಉಂಟಾದ ನೂಕುನುಗ್ಗಲಿನಲ್ಲಿ 123 ಜನರು ಸಾವನ್ನಪ್ಪಿದರು. ಸಾವಿರಾರು ಜನರಿದ್ದ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯ ಕೊರತೆಯೇ ಈ ದುರಂತಕ್ಕೆ ಕಾರಣವಾಯಿತು.
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಪೌನಿ ಪ್ರದೇಶದಲ್ಲಿ ಜೂನ್ 9 ರಂದು ಭಯೋತ್ಪಾದಕರು ಶಿವ ಖೋರಿಯಿಂದ ಕತ್ರಾಗೆ ಹೋಗುತ್ತಿದ್ದ ಬಸ್ಸಿನ ಮೇಲೆ ದಾಳಿ ನಡೆಸಿದರು.
ಸೆಪ್ಟೆಂಬರ್ 18 ರಂದು ತಿರುಪತಿ ದೇವಸ್ಥಾನದ ಪ್ರಸಾದವಾದ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದೊಂದಿಗೆ ವಿವಾದ ಭುಗಿಲೆದ್ದಿತು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆರೋಪಗಳ ನಂತರ ಈ ವಿಷಯವು ತೀವ್ರ ಸ್ವರೂಪವನ್ನು ಪಡೆದುಕೊಂಡಿತು.
ಬೆಂಗಳೂರಿನಲ್ಲಿ ಸೆಪ್ಟೆಂಬರ್ 3ರಂದು ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಆರೋಪಿಯು ತನ್ನ ಪ್ರಿಯತಮೆ ಮಹಾಲಕ್ಷ್ಮಿಯನ್ನು ಕೊಲೆ ಮಾಡಿ ಆಕೆಯ ದೇಹವನ್ನು 59 ತುಂಡುಗಳಾಗಿ ಕತ್ತರಿಸಿ ಫ್ರಿಜ್‌ನಲ್ಲಿ ಇಟ್ಟಿದ್ದಾನೆ.
ಕೇರಳದ ವಯನಾಡ್ ಜಿಲ್ಲೆಯಲ್ಲಿ ಜುಲೈ 30 ರ ರಾತ್ರಿ ಭೀಕರ ಭೂಕುಸಿತ ಸಂಭವಿಸಿದೆ. ಈ ದುರಂತದಲ್ಲಿ ಹಲವಾರು ಕಿಲೋಮೀಟರ್ ಪ್ರದೇಶವು ಸಂಪೂರ್ಣವಾಗಿ ನಾಶವಾಗಿದೆ. ಮೃತರ ಸಂಖ್ಯೆ 420 ಕ್ಕಿಂತ ಹೆಚ್ಚಿದೆ ಎಂದು ವರದಿಯಾಗಿದೆ.
ಕೋಲ್ಕತ್ತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಗಸ್ಟ್ 9 ರ ರಾತ್ರಿ ಮನ ಕಲಕುವ ಘಟನೆಯೊಂದು ಸಂಭವಿಸಿದೆ. ಮಹಿಳಾ ತರಬೇತಿ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ, ಬಳಿಕ ಆಕೆಯನ್ನು ನಿರ್ದಯವಾಗಿ ಕೊಲೆ ಮಾಡಲಾಗಿದೆ.
ಈ ವರ್ಷದ ಕೆಲವು ಘಟನೆಗಳು ಕೇವಲ ದೇಶಾದ್ಯಂತ ಚರ್ಚೆಯ ವಿಷಯವಾಗಲಿಲ್ಲ, ಆದರೆ ಇವುಗಳಿಂದ ಸರ್ಕಾರ ಮತ್ತು ಸಾಮಾನ್ಯ ಜನರು ಸಹ ಆಶ್ಚರ್ಯಚಕಿತರಾದರು.